Telegram Join My Telegram WhatsApp Join My WhatsApp

ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass:

ಗಣರಾಜ್ಯೋತ್ಸವ ದಿನಾಚರಣೆ

ಭಾರತದ ಪ್ರಜಾಪ್ರಭುತ್ವದ ಮಹತ್ವದ ಹಬ್ಬ ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುವ ಮಹಾನ್ ರಾಷ್ಟ್ರ. ಪ್ರತಿ ವರ್ಷ ಜನವರಿ 26ರಂದು ನಾವು ಹೆಮ್ಮೆಯಿಂದ ಆಚರಿಸುವ ಹಬ್ಬವೇ ಗಣರಾಜ್ಯೋತ್ಸವ ದಿನಾಚರಣೆ. ಈ ದಿನವು ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನವಾಗಿದ್ದು, ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸಿದ ದಿನವಾಗಿದೆ.

ಗಣರಾಜ್ಯೋತ್ಸವದ ಆಚರಣೆ;

ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಪರೇಡ್, ಸೇನಾ ಶಕ್ತಿಯ ಪ್ರದರ್ಶನ, ಸಾಂಸ್ಕೃತಿಕ ನೃತ್ಯಗಳು ಮತ್ತು ಜಾನಪದ ಕಲೆಗಳು ದೇಶದ ವೈವಿಧ್ಯತೆಯನ್ನು ಪರಿಚಯಿಸುತ್ತವೆ. ಶಾಲೆ-ಕಾಲೇಜುಗಳಲ್ಲಿ ಧ್ವಜಾರೋಹಣ, ಭಾಷಣಗಳು, ದೇಶಭಕ್ತಿ ಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.

ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ಇ-ಪಾಸ್ ವಿತರಿಸಲಾಗುತ್ತಿದ್ದು, ಸೇವಾ ಸಿಂಧು ವೆಬ್‌ಸೈಟ್ ಮೂಲಕ ಜನವರಿ 24ರೊಳಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. ಪ್ರವೇಶದ ವೇಳೆ ಮುದ್ರಿತ ಅಥವಾ ಡಿಜಿಟಲ್ ಇ-ಪಾಸ್ ಮತ್ತು ಗುರುತಿನ ಚೀಟಿ ಕಡ್ಡಾಯ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಜನವರಿ 22: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ 77ನೇ ಗಣರಾಜ್ಯೋತ್ಸವ ದಿನಾಚರಣೆ (Republic Day) ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ರವರು ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಜನವರಿ 24, 2026 ರ ಸಂಜೆ 5 ಗಂಟೆಯೊಳಗೆ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಸೂಚನೆ;

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್​​ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಸೇವಾಸಿಂಧು ಪೋರ್ಟಲ್ ಓಪನ್ ಮಾಡಿ
ಮೊದಲು Registered User Login ಆಯ್ಕೆಯನ್ನು ಕ್ಲಿಕ್ ಮಾಡಿ
ನಿಮ್ಮ Aadhaar ಸಂಖ್ಯೆಗೆ ಲಗತ್ತಾದ ಮೊಬೈಲ್ ನಂ. ಟೈಪ್ ಮಾಡಿ
OTP ಬರಲು ಕಾಯಿರಿ ಮತ್ತು ನಮೂದಿಸಿ
ಮೊದಲು ನೋಂದಣಿ ಮಾಡಿಲ್ಲ ಅಂದ್ರೆ, New User/Register ಆಯ್ಕೆಮಾಡಿ ಖಾತೆ ರಚಿಸಿ
ಲಾಗಿನ್ ಆದ ಮೇಲೆ “Departments and Services” ಅಥವಾ “Apply for Services” ವಿಭಾಗಕ್ಕೆ ಹೋಗಿ “Republic Day e-Pass” ಎನ್ನುವ ಆಯ್ಕೆಯನ್ನು ಹುಡುಕಿ
ನಿಮ್ಮ ವ್ಯಕ್ತಿಗತ ವಿವರಗಳು (ಹೆಸರು, ವಯಸ್ಸು, ಲಿಂಗ, ತಾಯಿ/ತಂದೆಯ ಹೆಸರು ಹಾಗು ನಗರ/ಜಿಲ್ಲೆ) ಭರ್ತಿ ಮಾಡಿ OTP Verification ಮತ್ತು ಯಾವುದೇ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಿ
ಎಲ್ಲಾ ಮಾಹಿತಿ ಸರಿಯಾಗಿ ಚೆಕ್ ಮಾಡಿ
ಎಲ್ಲ ವಿವರಗಳು ಸರಿಯಾಗಿ ಇದ್ದರೆ “Submit” ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿದ ನಂತರ e-Pass display ಆಗುತ್ತದೆ
ಈ pass-ನ್ನು ಡೌನ್​ಲೋಡ್ ಮಾಡಿ ಪ್ರಿಂಟ್ ಮಾಡಿ ಇಟ್ಟುಕೊಳ್ಳಿ
ಜನವರಿ 26ರಂದು ಆಧಾರ್/Photo ID ಜೊತೆಗೆ ಇದು ಮುಖ್ಯವಾಗಿ ಬೇಕಾಗುತ್ತದೆ.https://poojakannada.com/

Apply Link